Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:41 - ಪರಿಶುದ್ದ ಬೈಬಲ್‌

41 ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೆಹೂದದ ಅರಸ ಹಿಜ್ಕೀಯನ ಕಾಲದಲ್ಲಿ ಮೇಲೆ ನಮೂದಿಸಿದ ಪುರುಷರು ಅಲ್ಲಿ ವಾಸಿಸುತ್ತಿದ್ದ ಹಾಮ್ಯರನ್ನೂ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮ ಮಾಡಿದರು. ತಮ್ಮ ಆಡುಕುರಿಗಳಿಗಾಗಿ ಧಾರಾಳವಾಗಿ ಹುಲ್ಲುಗಾವಲುಗಳಿದ್ದುದರಿಂದ ಅಲ್ಲಿಯೇ ಸ್ಥಿರವಾಗಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ [ಆ ಹಾಮ್ಯರ] ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮಮಾಡಿದರು; ಮತ್ತು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಈಗ ಯಾರೂ ಉಳಿದಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:41
13 ತಿಳಿವುಗಳ ಹೋಲಿಕೆ  

ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.


ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.


ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು.


ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.


ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.


ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.


ಯೋತಾಮನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ.


ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು