Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:42 - ಪರಿಶುದ್ದ ಬೈಬಲ್‌

42 ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸಿಮೆಯೋನನ ಕುಲದ ಇತರ ಐದುನೂರು ಜನ ಸದಸ್ಯರು ಸೇಯೀರ್ ಬೆಟ್ಟಪ್ರದೇಶದ ಮೇಲೆ ದಾಳಿಮಾಡಿದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಇದಲ್ಲದೆ ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಪರ್ವತಕ್ಕೆ ಹೋದರು; ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:42
5 ತಿಳಿವುಗಳ ಹೋಲಿಕೆ  

ಹೋರೇಬ್ (ಸೀನಾಯಿ) ಬೆಟ್ಟದಿಂದ ಸೇಯೀರ್ ಬೆಟ್ಟದ ಮಾರ್ಗವಾಗಿ ಕಾದೇಶ್‌ಬರ್ನೇಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.


ಅಪ್ಪಯಿಮನ ಮಗ ಇಷ್ಷೀ; ಇಷ್ಷೀಯ ಮಗನು ಶೇಷಾನ್; ಶೇಷಾನನ ಮಗ ಅಹ್ಲೈ.


ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ, ಯೆಶಾಯನ ಮಗನು ರೆಫಾಯ, ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ, ಓಬದ್ಯನ ಮಗನು ಶೆಕನ್ಯ.


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು