Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:20 - ಪರಿಶುದ್ದ ಬೈಬಲ್‌

20 ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:20
35 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.


ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.


ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.


ಅದಕ್ಕಿಂತ ಮೊದಲೆಂದೂ ಹೀಗಾಗಿರಲಿಲ್ಲ; ಆಮೇಲೆಯೂ ಆಗಲಿಲ್ಲ. ಯೆಹೋವನು ಒಬ್ಬ ಮಾನವನ ಆಜ್ಞೆಯನ್ನು ಪಾಲಿಸಿದ ದಿನ ಅದಾಗಿತ್ತು. ಇಸ್ರೇಲರಿಗೋಸ್ಕರ ಯೆಹೋವನು ನಿಜವಾಗಿಯೂ ಯುದ್ಧಮಾಡುತ್ತಿದ್ದನು.


ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.


ಹೋರಾಟದ ಸಂದರ್ಭದಲ್ಲಿ ರಾಜನಾದ ಯೆಹೋಷಾಫಾಟನನ್ನು ಈ ಅಧಿಪತಿಗಳು ನೋಡಿದರು. ಆ ಅಧಿಕಾರಿಗಳು ಅವನನ್ನು ಇಸ್ರೇಲಿನ ರಾಜನೆಂದು ತಿಳಿದು ಅವನನ್ನು ಕೊಲ್ಲುವುದಕ್ಕೆ ಅವರು ಹೋದರು. ಯೆಹೋಷಾಫಾಟನು ಕೂಗಿಕೊಳ್ಳಲಾರಂಭಿಸಿದನು.


ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು.


ಮೋಶೆ ತನ್ನ ಕೈಗಳನ್ನು ಮೇಲೆತ್ತಿದಾಗ ಇಸ್ರೇಲರು ಜಯಗಳಿಸಿದರು. ಆದರೆ ಮೋಶೆಯು ತನ್ನ ಕೈಗಳನ್ನು ಕೆಳಗಿಳಿಸಿದಾಗ ಅಮಾಲೇಕ್ಯರು ಜಯಗಳಿಸಿದರು.


ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.


ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.


ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.


ಹಾಗೆ ನಾವು ನಮ್ಮ ಪ್ರಯಾಣದ ಕುರಿತು ದೇವರಿಗೆ ಉಪವಾಸ ಪ್ರಾರ್ಥನೆ ಮಾಡಿದೆವು. ಆತನು ಅದನ್ನು ಅನುಗ್ರಹಿಸಿದನು.


ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.


ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.


“ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು. ಆದರೆ ಗಾದನು ಅವರನ್ನು ಓಡಿಸಿ ಬಿಡುವನು.”


ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.


ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.


ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯಸ್ಥಾನವಾಗಿದ್ದಾನೆ.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು