1 ಪೂರ್ವಕಾಲ ವೃತ್ತಾಂತ 6:15 - ಪರಿಶುದ್ದ ಬೈಬಲ್15 ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಸೆರೆಗೆ ಕಳುಹಿಸಿದ ಜುದೇಯದ ಮತ್ತು ಜೆರುಸಲೇಮಿನ ಇತರ ಜನರೊಂದಿಗೆ ಅರಸ ನೆಬೂಕದ್ನೆಚ್ಚರನು ಯೆಹೋಚಾದಾಕನನ್ನು ಗಡೀಪಾರು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಸೆರೆಯೊಯ್ದಾಗ ಈ ಯೆಹೋಚಾದಾಕನೂ ಅವರೊಡನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು. ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.