Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:47 - ಪರಿಶುದ್ದ ಬೈಬಲ್‌

47 ಶೆಮೆರನು ಮಹ್ಲೀಯನ ಮಗ. ಮಹ್ಲೀಯನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ. ಮೆರಾರಿಯು ಲೇವಿಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಮಹ್ಲೀ, ಮೂಷೀ, ಮೆರಾರಿ ಹಾಗು ಲೇವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇವನು ಮಹ್ಲೀಯ ಮಗನು; ಇವನು ಮೂಷೀಯ ಮಗನು; ಇವನು ಮೆರಾರಿಯ ಮಗನು; ಇವನು ಲೇವಿಯ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅವನು ಮಹ್ಲೀಯ ಮಗನು, ಅವನು ಮೂಷೀಯ ಮಗನು, ಅವನು ಮೆರಾರೀಯ ಮಗನು, ಅವನು ಲೇವಿಯ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:47
14 ತಿಳಿವುಗಳ ಹೋಲಿಕೆ  

ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.


ಮಹ್ಲೀ ಮತ್ತು ಮೂಷೀ ಮೆರಾರೀಯ ಗಂಡುಮಕ್ಕಳು. ಮಹ್ಲೀಯ ಮಕ್ಕಳು ಯಾರೆಂದರೆ: ಎಲ್ಲಾಜಾರ್ ಮತ್ತು ಕೀಷ್.


ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.


ಬಳಿಕ ಪವಿತ್ರ ಗುಡಾರವನ್ನು ಕೆಳಗಿಳಿಸಲಾಯಿತು. ಗೇರ್ಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರ ಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು.


ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು.


ಮೆರಾರೀಯರಲ್ಲಿಯೂ ಮೂವತ್ತರಿಂದ ಐವತ್ತು ವರ್ಷದ ಒಳಗಿರುವ ಮತ್ತು ದೇವದರ್ಶನ ಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಲಾಯಿತು.


ಮೆರಾರೀಯ ಗೋತ್ರಗಳು: ಮಹ್ಲೀ ಮತ್ತು ಮೂಷೀ. ಅವು ಲೇವಿ ಕುಲದ ಗೋತ್ರಗಳಾಗಿವೆ.


ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.


ಹಿಲ್ಕೀಯನು ಅಮ್ಚೀಯನ ಮಗ. ಅಮ್ಚೀಯನು ಬಾನೀಯನ ಮಗ. ಬಾನೀಯನು ಶೆಮೆರನ ಮಗ.


ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು.


ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಹೆಬ್ರೋನ್ ಪಟ್ಟಣದ ಸುತ್ತಮುತ್ತಲಿದ್ದ ಊರುಗಳನ್ನು ಮತ್ತು ಹೊಲಗಳನ್ನು ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು