1 ಪೂರ್ವಕಾಲ ವೃತ್ತಾಂತ 6:48 - ಪರಿಶುದ್ದ ಬೈಬಲ್48 ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅವರ ಸಹೋದರರಾದ ಇತರ ಲೇವಿಯರು ಆರಾಧನೆಯ ಸ್ಥಳದಲ್ಲಿ ಬೇರೆ ಕೆಲಸಗಳಿಗೆ ನೇಮಕವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಅವರ ಸಹೋದರರಾದ ಇತರ ಲೇವಿಯರು ದೇವಾಲಯವಾಗಿರುವ ಮಂದಿರದ ಸೇವೆಗಾಗಿ ನೇವಿುಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅವರ ಸಹೋದರರಾದ ಇತರ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಕವಾಗಿದ್ದರು. ಅಧ್ಯಾಯವನ್ನು ನೋಡಿ |
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.