Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:49 - ಪರಿಶುದ್ದ ಬೈಬಲ್‌

49 ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗನುಸಾರವಾಗಿ ಆರೋನನೂ ಅವನ ಮಕ್ಕಳೂ ಇಸ್ರಾಯೇಲ್ಯರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮಮಾಡುತ್ತಾ ಧೂಪಹಾಕುತ್ತಾ ಮಹಾಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ ದೋಷಪರಿಹಾರ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:49
18 ತಿಳಿವುಗಳ ಹೋಲಿಕೆ  

ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ


ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.


ಮೋಶೆಯು ಯೆಹೋವನ ಸೇವಕನಾಗಿದ್ದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯ ಮರಣಾನಂತರ ಯೆಹೋವನು ಯೆಹೋಶುವನೊಡನೆ ಮಾತನಾಡಿ,


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ಆಗ ಮೋಶೆಯು ಕೋರಹನಿಗೆ, “ನೀನು ಮತ್ತು ನಿನ್ನ ಹಿಂಬಾಲಕರೆಲ್ಲರು ನಾಳೆ ಯೆಹೋವನ ಸನ್ನಿಧಿಯಲ್ಲಿ ಆರೋನನೊಡನೆ ನಿಲ್ಲಬೇಕು.


“ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.


“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು