Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:50 - ಪರಿಶುದ್ದ ಬೈಬಲ್‌

50 ಇವರು ಆರೋನನ ಗಂಡುಮಕ್ಕಳು: ಎಲ್ಲಾಜಾರನು ಆರೋನನ ಮಗ. ಫೀನೆಹಾಸನು ಎಲ್ಲಾಜಾರನ ಮಗ. ಅಬೀಷೂವನು ಫೀನೆಹಾಸನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆರೋನನ ವಂಶಜರು: ಎಲ್ಲಾಜಾರ್, ಫೀನೆಹಾಸ್, ಅಬೀಷೂವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆರೋನನ ಸಂತಾನದವರು - ಆರೋನನ ಮಗನು ಎಲ್ಲಾಜಾರ್; ಇವನ ಮಗನು ಫೀನೆಹಾಸ್; ಇವನ ಮಗನು ಅಬೀಷೂವ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆರೋನನ ವಂಶಜರು: ಅವನ ಮಗನು ಎಲಿಯಾಜರನು, ಅವನ ಮಗನು ಫೀನೆಹಾಸನು, ಅವನ ಮಗನು ಅಬೀಷೂವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:50
13 ತಿಳಿವುಗಳ ಹೋಲಿಕೆ  

ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಬಾದನು ಮತ್ತು ಬಿನ್ನೂಯನ ಮಗನಾದ ನೋವದ್ಯನು ಅವರ ಸಂಗಡ ಇದ್ದರು.


ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.


ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.


ಆದರೆ ನಾದಾಬ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದಾಬ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು.


ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


ಬುಕ್ಕೀಯು ಅಬೀಷೂವನ ಮಗ. ಉಜ್ಜೀಯು ಬುಕ್ಕೀಯ ಮಗ. ಉಜ್ಜೀಯ ಮಗನು ಜೆರಹ್ಯಾಹ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು