1 ಪೂರ್ವಕಾಲ ವೃತ್ತಾಂತ 6:60 - ಪರಿಶುದ್ದ ಬೈಬಲ್60 ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.