Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:24 - ಪರಿಶುದ್ದ ಬೈಬಲ್‌

24 ಎಫ್ರಾಯೀಮನ ಮಗಳ ಹೆಸರು ಶೇರ. ಅವಳು ಕೆಳಗಿನ ಬೇತ್‌ಹೋರೋನ್ ಮತ್ತು ಮೇಲಿನ ಬೇತ್‌ಹೋರೋನ್ ಮತ್ತು ಕೆಳಗಿನ ಉಜ್ಜೇನ್‌ಶೇರ ಮತ್ತು ಮೇಲಿನ ಉಜ್ಜೇನ್‌ಶೇರ ಪಟ್ಟಣಗಳನ್ನು ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಶೇರ ಎಂಬವಳು ಅವನ ಮಗಳು; ಈಕೆಯು ಮೇಲಣ ಮತ್ತು ಕೆಳಗಣ ಬೇತ್‍ಹೋರೋನ್ ಎಂಬ ಪಟ್ಟಣಗಳನ್ನೂ ಉಜ್ಜೇನ್‍ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:24
7 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ತ್ಯವು ಇಂತಿದೆ: ಅವರ ಸ್ವಾಸ್ತ್ಯದ ಪೂರ್ವದಿಕ್ಕಿನ ಸೀಮೆಯು ಮೇಲಿನ ಬೇತ್‌ಹೋರೋನಿನ ಹತ್ತಿರ ಇದ್ದ ಅಟಾರೋತದ್ದಾರಿನಿಂದ ಆರಂಭವಾಗುತ್ತದೆ.


ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯಪ್ಲೇಟ್ಯರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್‌ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೆನಿಯನ್ ಸಮುದ್ರದತ್ತ ಮುಂದುವರೆಯುತ್ತದೆ.


ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು.


ರಾಜನಾದ ಸೊಲೊಮೋನನು ಆ ನಗರವನ್ನು ಮತ್ತೆ ನಿರ್ಮಿಸಿದನು. ಸೊಲೊಮೋನನು ಕೆಳಗಿನ ಬೇತ್‌ಹೋರೋನ್ ನಗರವನ್ನು ಸಹ ಕಟ್ಟಿಸಿದನು;


ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.


ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ “ಬೆರೀಯ” ಎಂದು ಹೆಸರಿಟ್ಟರು.


ರೆಫಹನು ಬೆರೀಯನ ಮಗನು. ರೆಫಹನ ಮಗನು ರೆಷೆಫ್. ರೆಷೆಫನ ಮಗನು ತೆಲಹ. ತೆಲಹನ ಮಗನು ತಹನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು