Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:28 - ಪರಿಶುದ್ದ ಬೈಬಲ್‌

28 ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವರು ಜೆರುಸಲೇಮಿನಲ್ಲಿ ನೆಲೆಸಿದ ಪುರಾತನ ಕುಟುಂಬಗಳ ಮುಖ್ಯಸ್ಥರೂ ಅವರ ಪ್ರಮುಖ ವಂಶಜರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವರು ವಂಶಾವಳಿಯ ಪ್ರಕಾರ ಗೋತ್ರ ಪ್ರಧಾನರೂ ಯೆರೂಸಲೇವಿುನಲ್ಲಿ ವಾಸಿಸುವವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:28
11 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಯಾರೆಷ್ಯ, ಏಲೀಯ ಮತ್ತು ಜಿಕ್ರೀ.


ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ.


ಮಿಕ್ಲೋತನು ಶಿಮಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರೆಂದರೆ:


ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ.


ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು