Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:33 - ಪರಿಶುದ್ದ ಬೈಬಲ್‌

33 ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕೀಷನ ತಂದೆ ನೇರ. ಕೀಷ ಅರಸ ಸೌಲನ ತಂದೆ. ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು ಸೌಲನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಇವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:33
10 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.


ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವ ಎಂಬವರನ್ನು ಫಿಲಿಷ್ಟಿಯರು ಕೊಂದರು.


ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.


ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.


ಮಿಕ್ಲೋತನು ಶಿಮಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ಯೋನಾತಾನನ ಮಗ ಮೆರೀಬ್ಬಾಳ್. ಮೆರೀಬ್ಬಾಳನು ಮೀಕನ ತಂದೆ.


ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಸೌಲನು ಸುಂದರನಾದ ಯುವಕನಾಗಿದ್ದನು. ಸೌಲನಿಗಿಂತ ಸುಂದರರು ಅಲ್ಲಿರಲಿಲ್ಲ. ಸೌಲನು ಇತರ ಇಸ್ರೇಲ್ ಗಂಡಸರಿಗಿಂತ ಎತ್ತರವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು