1 ಪೂರ್ವಕಾಲ ವೃತ್ತಾಂತ 8:34 - ಪರಿಶುದ್ದ ಬೈಬಲ್34 ಯೋನಾತಾನನ ಮಗ ಮೆರೀಬ್ಬಾಳ್. ಮೆರೀಬ್ಬಾಳನು ಮೀಕನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಯೋನಾತಾನ್ ಮೆರೀಬ್ಬಾಳನ ತಂದೆ. ಇವನು ಮೀಕನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು. ಅಧ್ಯಾಯವನ್ನು ನೋಡಿ |
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.
ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.