Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:1 - ಪರಿಶುದ್ದ ಬೈಬಲ್‌

1 ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:1
22 ತಿಳಿವುಗಳ ಹೋಲಿಕೆ  

ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಾಡಿದರೂ ಸಿಗಲಿಲ್ಲ. ತಮ್ಮ ಪೂರ್ವಿಕರು ಯಾಜಕರೆಂದು ರುಜುವಾತು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯಾಜಕ ಪಟ್ಟಿಯಲ್ಲಿ ಅವರನ್ನು ಸೇರಿಸಲಿಲ್ಲ.


ಆದ್ದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:


ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652


ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಊಲಾಮನ ಗಂಡುಮಕ್ಕಳೆಲ್ಲರೂ ರಣವೀರರು; ಬಿಲ್ಲುಬಾಣಗಳನ್ನು ಉಪಯೋಗಿಸುವುದರಲ್ಲಿ ನಿಪುಣರು. ಅವರಿಗೆ ಅನೇಕ ಗಂಡುಮಕ್ಕಳು ಮತ್ತು ಗಂಡುಮೊಮ್ಮಕ್ಕಳಿದ್ದರು. ಅವರಿಗೆ ಒಟ್ಟು ನೂರೈವತ್ತು ಮಂದಿ ಗಂಡುಮಕ್ಕಳು ಮತ್ತು ಗಂಡುಮೊಮ್ಮಕ್ಕಳು ಇದ್ದರು. ಇವರೆಲ್ಲಾ ಬೆನ್ಯಾಮೀನನ ಸಂತತಿಯವರು.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.


ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಈ ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು.


ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.


ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.


ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.


ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು