1 ಪೂರ್ವಕಾಲ ವೃತ್ತಾಂತ 9:11 - ಪರಿಶುದ್ದ ಬೈಬಲ್11 ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಕೀನ್, ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆದ ಅಜರ್ಯ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ; ಅಧ್ಯಾಯವನ್ನು ನೋಡಿ |
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.