1 ಪೂರ್ವಕಾಲ ವೃತ್ತಾಂತ 9:18 - ಪರಿಶುದ್ದ ಬೈಬಲ್18 ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದುವರೆಗೂ ಶಲ್ಲೂಮನ ಕುಟುಂಬಸ್ಥರು ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಲೇವಿಯರ ಪಾಳೆಯಗಳ ಕಾವಲುಗಾರರಾಗಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶಲ್ಲೂಮ್ಯರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಅಧ್ಯಾಯವನ್ನು ನೋಡಿ |
ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.