Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:25 - ಪರಿಶುದ್ದ ಬೈಬಲ್‌

25 ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಗ್ರಾಮಗಳಲ್ಲಿದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸಮಾಡುವದಕ್ಕೋಸ್ಕರ ಸರತಿಯ ಮೇಲೆ ಏಳೇಳು ದಿವಸ ಬರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:25
7 ತಿಳಿವುಗಳ ಹೋಲಿಕೆ  

ಯೆಹೋಯಾದಾವನು ಅವರಿಗೆ, “ನೀವು ಈ ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್‌ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.


ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.


ಸಬ್ಬತ್‌ದಿನದಂದು ಕಾಯಲು ಬರುವ ನಿಮ್ಮೆಲ್ಲರ ಎರಡು ಪಡೆಗಳು ಯೆಹೋವನ ಆಲಯವನ್ನು ಕಾಯುತ್ತಾ ರಾಜನಾದ ಯೆಹೋವಾಷನನ್ನು ಕಾಯಬೇಕು.


ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು.


ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.


ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.


ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು