Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:28 - ಪರಿಶುದ್ದ ಬೈಬಲ್‌

28 ಅವರಲ್ಲಿ ಕೆಲವರು ದೇವಾಲಯದ ಪಾತ್ರೆಗಳಿಗೆ ಮೇಲ್ವಿಚಾರಕರಾಗಿದ್ದು ಅವುಗಳನ್ನು ಒಳಗೆ ತರುವಾಗಲೂ ಹೊರಗೆ ತೆಗೆದುಕೊಂಡು ಹೋಗುವಾಗಲೂ ಲೆಕ್ಕಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಇತರ ಲೇವಿಯರದಾಗಿತ್ತು. ಅವುಗಳನ್ನು ಕೊಡುವಾಗಲೂ ಮರಳಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಅವರಲ್ಲಿ ಕೆಲವರು ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರಿಗಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸೇವೆಯ ಸಲಕರಣೆಗಳನ್ನು ಒಳಗೆ ಲೆಕ್ಕದ ಪ್ರಕಾರ ತರುವುದಕ್ಕೂ, ಹೊರಗೆ ಲೆಕ್ಕದ ಪ್ರಕಾರ ತರುವುದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:28
9 ತಿಳಿವುಗಳ ಹೋಲಿಕೆ  

ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


ಅವರು ರಾತ್ರಿಯಲ್ಲಿ ಕಾವಲು ಕಾಯುತ್ತಿದ್ದರು ಮತ್ತು ಪ್ರತಿಮುಂಜಾನೆ ದೇವಾಲಯದ ಬಾಗಿಲನ್ನು ತೆರೆಯುತ್ತಿದ್ದರು.


ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು.


“ಬಳಿಕ ಆರಾಧನೆಗಾಗಿ ಪವಿತ್ರಸ್ಥಳದಲ್ಲಿ ಉಪಯೋಗಿಸಲ್ಪಡುವ ಎಲ್ಲಾ ವಿಶೇಷ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳನ್ನು ನೀಲಿಬಟ್ಟೆಯಿಂದ ಮುಚ್ಚಬೇಕು. ಬಳಿಕ ಅವುಗಳಿಗೆ ಶ್ರೇಷ್ಠವಾದ ತೊಗಲನ್ನು ಹೊದಿಸಬೇಕು. ಅವರು ಈ ವಸ್ತುಗಳನ್ನು ಹೊರುವುದಕ್ಕಾಗಿ ಚೌಕಟ್ಟಿಗೆ ಕಟ್ಟಬೇಕು.


ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು