ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.
ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.
ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.