Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:39 - ಪರಿಶುದ್ದ ಬೈಬಲ್‌

39 ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನೇರನು ಕೀಷನ ತಂದೆ. ಕೀಷ ಸೌಲನ ತಂದೆ. ಸೌಲನಿಗೆ ನಾಲ್ವರು ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಪ್ಬಾಳ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ್ ಇವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:39
8 ತಿಳಿವುಗಳ ಹೋಲಿಕೆ  

ಆದ್ದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲಿ ಈಟಿಯಾಗಲಿ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.


ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.


ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವ ಎಂಬವರನ್ನು ಫಿಲಿಷ್ಟಿಯರು ಕೊಂದರು.


ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.


ಮಿಕ್ಲೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು.


ಯೋನಾತಾನನ ಮಗನಾದ ಮೆರೀಬ್ಬಾಳನು ಮೀಕನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು