Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:1 - ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚ್ಯಾ ಅಪೊಸ್ತಲಾನ್,ಪೆದ್ರುನ್, ಪೊಂತುಸಾನ್, ಗಾಲಾತ್ಸಿಯಾತ್, ಕಪ್ಪಾದೊಸಿಯಾತ್, ಆಸಿಯಾತ್, ಅನಿ ಬಿಥುನಿಯಾತ್ ಪಗ್ಳುನ್ ಗೆಲ್ಲ್ಯಾ ಸಗ್ಳ್ಯಾಕ್ನಿ ಲಿವ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:1
34 ತಿಳಿವುಗಳ ಹೋಲಿಕೆ  

ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.


ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.


ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.


ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.


ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.


ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ.


ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.


ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.


ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.


ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


“‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು