1 ಪೇತ್ರನು 1:10 - ಪರಿಶುದ್ದ ಬೈಬಲ್10 ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರು ನಿಮಗೆ ತೋರಿಸಿರುವ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮ್ಕಾ ಗಾವುಕ್ ಮನುನ್ ಅಸಲ್ಲ್ಯಾ ಕುರ್ಪೆಚ್ಯಾ ವಿಶಯಾತ್ ಸಾಂಗುನ್ ದಿಲ್ಲ್ಯಾ ಪ್ರವಾದ್ಯಾನಿ ಹ್ಯಾ ಫುಕೊಟ್ಚ್ಯಾ ದೆನ್ಗಿ ವಿಶಯಾತ್ ಹುರ್ಶಾಕಿನ್ ಇಚಾರ್ ಅನಿ ಸೊದ್ನಾ ಕರಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.