1 ಪೇತ್ರನು 1:12 - ಪರಿಶುದ್ದ ಬೈಬಲ್12 ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.