1 ಪೇತ್ರನು 1:18 - ಪರಿಶುದ್ದ ಬೈಬಲ್18 ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮ್ಚ್ಯಾ ವಾಡ ವಡ್ಲಾನಿ ಶಿಕ್ವುನ್ ದಿಲ್ಲ್ಯಾ ಫಾಯ್ದ್ಯಾಕ್ ಪಡಿನಸಲ್ಯಾ ಚಲ್ನುಕಿತ್ನಾ ತುಮ್ಕಾ ಸುಟ್ಕಾ ಗಾವಲ್ಲೆ ಹಾಳ್ ಹೊವ್ನ್ ಜಾತಲ್ಯಾ ಸೊನ್ಯಾ-ಚಾಂದಿನಿ ನ್ಹಯ್, ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.