1 ಪೇತ್ರನು 1:2 - ಪರಿಶುದ್ದ ಬೈಬಲ್2 ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದೆವಾ ಬಾಬಾನ್ ಅದ್ದಿಚ್ಯಾನುಚ್ ವಳ್ಕುನ್ ಎಚುನ್ ಕಾಡಲ್ಲ್ಯಾ, ಪವಿತ್ರ್ ಆತ್ಮ್ಯಾಚ್ಯಾ ವೈನಾ ಯೆಗ್ಳುನ್ ಕಾಡಲ್ಲಿ, ಜೆಜು ಕ್ರಿಸ್ತಾಕ್ ಖಾಯ್ಲ್ ಹೊವ್ನ್ ಚಲ್ತಲ್ಯಾ ಜಿವನಾಕ್ ಒಪ್ಸುನ್ ದಿಲ್ಲೆ ತುಮಿಚ್ ತುಮ್ಕಾ ಭರ್ಪುರ್ ಕುರ್ಪಾ ಅನಿ ಶಾಂತಿ ಗಾಂವುಂದಿತ್. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.