1 ಪೇತ್ರನು 1:20 - ಪರಿಶುದ್ದ ಬೈಬಲ್20 ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆಕಾ ಜಗ್ ರಚುಚ್ಯಾ ಅದ್ದಿಚ್ಯಾನುಚ್ ದೆವಾನ್ ಎಚುನ್ ಕಾಡಲ್ಲ್ಯಾನ್, ಅನಿ ಹ್ಯಾ ಆಕ್ರಿಚ್ಯಾ ಯೆಳಾರ್ ತುಮ್ಚೆಸಾಟ್ನಿ ತೆಕಾ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.