1 ಪೇತ್ರನು 1:21 - ಪರಿಶುದ್ದ ಬೈಬಲ್21 ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಚೆ ವೈನಾ ತೆಕಾ ಝಿತ್ತೊ ಕರುನ್ ಉಟ್ವುನ್ ಅಪ್ನಾಚಿ ಮಹಿಮಾ ದಿಲ್ಲ್ಯಾ ದೆವಾ ವರ್ತಿ ತುಮಿ ವಿಶ್ವಾಸ್ ಕರುಕ್ ಪಾವ್ಲ್ಯಾಸಿ. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.