1 ಪೇತ್ರನು 1:6 - ಪರಿಶುದ್ದ ಬೈಬಲ್6 ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಚೆಸಾಟ್ನಿ ತುಮಿ ಖುಶಿ ಹೊವಾ, ಅತ್ತಾ ಎಕ್ ಉಲ್ಲೊ ಎಳ್ ತುಮ್ಕಾ ಕಸ್ಟ್ ಸೊಸುಕ್ ಗಾವ್ತಾ ಹೊಲ್ಯಾರ್ಬಿ ಕಾಯ್ ಹೊಲೆ? ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.