1 ಪೇತ್ರನು 2:1 - ಪರಿಶುದ್ದ ಬೈಬಲ್1 ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತೆಚೆಸಾಟ್ನಿ ಸಗ್ಳ್ಯಾ ರಿತಿಚೆ ಬುರ್ಶೆಪಾನ್, ಹಾಟ್ಮಾರಿಪಾನ್, ಕುಶ್ಡೆಪಾನ್ ಇರ್ಸ್ಯಾ, ಢೊಂಗ್ ಅನಿ ಸಗ್ಳ್ಯಾ ರಿತಿಚೆ ವಾಯ್ಟ್ ಬೊಲ್ನೆ ಸೊಡುನ್ ಸೊಡಾ. ಅಧ್ಯಾಯವನ್ನು ನೋಡಿ |
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.