Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:13 - ಪರಿಶುದ್ದ ಬೈಬಲ್‌

13 ಈ ಲೋಕದ ಅಧಿಕಾರಿಗಳಿಗೆ ವಿಧೇಯರಾಗಿರಿ. ಪ್ರಭುವಿಗಾಗಿ ಇದನ್ನು ಮಾಡಿರಿ. ಸರ್ವಾಧಿಕಾರಿಯಾದ ರಾಜನಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯರು ನೇವಿುಸಿರುವ ಯಾವ ಅಧಿಕಾರಕ್ಕಾದರೂ ಕರ್ತನ ನಿವಿುತ್ತ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಧನಿಯಾ ಸಾಟ್ನಿ ಮಾನ್ಸಾನಿ ನೆಮಲ್ಲ್ಯಾ ಸಗ್ಳ್ಯಾ ಅಧಿಕಾರಿಕ್ನಿ ಖಾಯ್ಲ್ ಹೊವ್ನ್ ರಾವಾ, ತಸೆಚ್ ರಾಜಾಕ್ಬಿ, ಕಶ್ಯಾಕ್ ಮಟ್ಲ್ಯಾರ್, ತೊ ಸಗ್ಳ್ಯಾನ್ ಮೊಟೊ ಅಧಿಕಾರಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:13
13 ತಿಳಿವುಗಳ ಹೋಲಿಕೆ  

ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.


ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.


ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.


ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”


ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.


ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.


ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು