1 ಪೇತ್ರನು 2:21 - ಪರಿಶುದ್ದ ಬೈಬಲ್21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಹೆಚ್ಯಾ ಸಾಟ್ನಿ ಬಲ್ವುನ್ ಹೊಲಾ ಕ್ರಿಸ್ತಾನ್ ಬಿ ತುಮ್ಚ್ಯಾ ಸಾಟ್ನಿ ಕಸ್ಟ್ ಹೊವ್ನ್ ಹಾಯ್ ತೆಚ್ಯಾ ಸಾಟ್ನಿ ತುಮಿ ತೆಚ್ಯಾ ಸಾರ್ಕೆ ಚಲುಚೆ ಕ್ರಿಸ್ತಾಚ್ಯಾ ಸಾರ್ಕೆಚ್ ಕರುಚೆ. ಅಧ್ಯಾಯವನ್ನು ನೋಡಿ |
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.