1 ಪೇತ್ರನು 2:25 - ಪರಿಶುದ್ದ ಬೈಬಲ್25 ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಕಶ್ಯಾಕ್ ಮಟ್ಲ್ಯಾರ್, ತುಮಿ ವಾಟ್ ಚುಕುನ್ ಗೆಲ್ಲ್ಯಾ ಬಕ್ರ್ಯಾಂಚ್ಯಾ ಸಾರ್ಕೆ ಹೊತ್ಯಾಶಿ ಖರೆ ಅತ್ತಾ ತುಮ್ಕಾ ತುಮ್ಚ್ಯಾ ಮುಖಂಡಾಕ್ಡೆ ಅನಿ ತುಮ್ಚೆ ಆತ್ಮೆ ರಾಕ್ತಲ್ಯಾಕ್ಡೆ ಹಾನುನ್ ಹೊಲಾ. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.