Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:4 - ಪರಿಶುದ್ದ ಬೈಬಲ್‌

4 ಪ್ರಭುವಾದ ಯೇಸುವೇ ಜೀವವುಳ್ಳ “ಕಲ್ಲು.” ಈ ಲೋಕದ ಜನರು ತಮಗೆ ಆ “ಕಲ್ಲು” (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ “ಕಲ್ಲು.” ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದ್ದರಿಂದ ಆತನ ಹತ್ತಿರಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹ್ಯೊ ಝಿತ್ತೊ ಗುಂಡೊ ಹೊವ್ನ್ ಹೊತ್ತ್ಯಾ ಧನಿಯಾಕ್ಡೆ ಯೆವಾ ಲೊಕಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊ ದೆವಾನ್ ತೆಕಾ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:4
31 ತಿಳಿವುಗಳ ಹೋಲಿಕೆ  

ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”


ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


“ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.


ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


“ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


ಅಸ್ತಿವಾರವನ್ನು ಆಗಲೇ ಹಾಕಲಾಗಿದೆ. ಆ ಅಸ್ತಿವಾರವು ಯೇಸು ಕ್ರಿಸ್ತನೇ. ಆ ಅಸ್ತಿವಾರವನ್ನಲ್ಲದೆ ಬೇರೊಂದು ಅಸ್ತಿವಾರವನ್ನು ಬೇರೆ ಯಾರೂ ಹಾಕಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು