1 ಪೇತ್ರನು 2:5 - ಪರಿಶುದ್ದ ಬೈಬಲ್5 ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಥೈ ತುಮಿಬಿ ಝಿತ್ತೆ ಗುಂಡೆ ಹೊವ್ನ್ ಪವಿತ್ರ್ ಯಾಜಕಾಂಚ್ಯಾ ಸಾರ್ಕೆ ಸೆವಾ ಕರುನ್ ಜೆಜು ಕ್ರಿಸ್ತಾಚ್ಯಾ ವೈನಾ ಆತ್ಮಿಕ್ ಅನಿ ದೆವಾಕ್ ಸ್ವಿಕಾರ್ ಹೊತಲಿ ಬಲಿ ಭೆಟ್ವುತ್ಯಾಶಿ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.