1 ಪೇತ್ರನು 2:6 - ಪರಿಶುದ್ದ ಬೈಬಲ್6 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ; ಆಯ್ಕ್ ಚಿಯೊನಾತ್ ಮಿಯಾ ಎಚುನ್ ಕಾಡಲ್ಲೊ ಎಕ್ ಗುಂಡೊ ಥವ್ತಾ ತೊ ಲೈ ಮಹತ್ವಾಚೊ ಅನಿ ಕಿಮ್ತಿಚೊ ಗುಂಡೊ, ಅನಿ ತೆಚೆ ವರ್ತಿ ಜೆ ಕೊನ್ ವಿಶ್ವಾಸ್ ಥವ್ತಾ ತೊ ಕನ್ನಾಬಿ ನಿರಾಶ್ ಹೊಯ್ನಾ. ಅಧ್ಯಾಯವನ್ನು ನೋಡಿ |
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.