1 ಪೇತ್ರನು 2:8 - ಪರಿಶುದ್ದ ಬೈಬಲ್8 ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ಎಕ್ ಕಡೆ ಪವಿತ್ರ್ ಪುಸ್ತಕ್ ಮನ್ತಾ; ಲೊಕಾಕ್ನಿ ಆಡ್ಕಳ್ತಲೊ ಗುಂಡೊ ಹ್ಯೊ ಲೊಕಾ ಆದ್ಳುನ್ ಪಡಿಸಾರ್ಕೆ ಕರ್ತಾ ತೆನಿ ದೆವಾಚಿ ಇಚ್ಚ್ಯಾ ಕಾಯ್ ಮನ್ತಲ್ಲ್ಯಾ ಗೊಸ್ಟಿ ವರ್ತಿ ವಿಶ್ವಾಸ್ ಕರಿನಾತ್ ತಸೆ ಮನುನ್ ತೆನಿ ಅದಳ್ತಾತ್. ಅಧ್ಯಾಯವನ್ನು ನೋಡಿ |