1 ಪೇತ್ರನು 3:10 - ಪರಿಶುದ್ದ ಬೈಬಲ್10 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜೀವದಲ್ಲಿ ಸಂತೋಷಪಟ್ಟು ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನೂ ಬಿಗಿಹಿಡಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಬಾಳನ್ನು ಪ್ರೀತಿಸಿ ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಪವಿತ್ರ್ ಪುಸ್ತಕ್ ಅಸೆ ಸಾಂಗ್ತಾ; ಹ್ಯಾ ಜಿವನಾತ್ ಉಮ್ಮೆದಿನ್ ರ್‍ಹಾವ್ನ್ ಬರಿ ದಿಸಾ ಬಗುಚೆ ಮನುನ್ ಆಶಾ ಕರ್‍ತಲೊ ಬುರ್ಶಿ ಗೊಸ್ಟಿಯಾ ಬೊಲಿನಸ್ತಾನಾ ಅನಿ ಝುಟಿ ಬೊಲ್ನಿಯಾ ಬೊಲಿನಸ್ತಾನಾ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |