1 ಪೇತ್ರನು 3:16 - ಪರಿಶುದ್ದ ಬೈಬಲ್16 ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಹೆ ಕಾಮ್ ತುಮಿ ಬರ್‍ಯಾ ಪಾನಾನ್ ಅನಿ ಗೌರವಾನ್ ಕರಾ ತುಮ್ಚೊ ಮನ್ ಪವಿತ್ರ್ ರಾಂವ್ದಿತ್, ಅಸೆ ತನ್ನಾ ತುಮ್ಚ್ಯಾ ವಿಶಯಾತ್ ಬುರ್ಶಿ ಗೊಸ್ಟಿಯಾ ಬೊಲ್ತಲೆ ತುಮಿ ಕ್ರಿಸ್ತಾತ್ ಬರೆ ಹೊವ್ನ್ ಜಿವನ್ ಕರ್ತಲೆ ಬಗುನ್ ಅಪ್ನಿ ಸಾಂಗಲ್ಲ್ಯಾ ಬುರ್ಶ್ಯಾ ಸಂಗ್ತಿಯಾಕ್ನಿ ತೆನಿಚ್ ಮರ್ಯಾದ್ ಕರುನ್ ಘೆಂವ್ದಿತ್. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.