Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:17 - ಪರಿಶುದ್ದ ಬೈಬಲ್‌

17 ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ವಾಯ್ಟ್ ಕರ್ತಲ್ಲ್ಯಾಚ್ಯಾನ್ಕಿ ದೆವಾಚಿ ಇಚ್ಚ್ಯಾ ಹೊಯ್ ಹೊಲ್ಲ್ಯಾರ್ ಬರೆ ಕರ್ತಲ್ಯಾಸಾಟ್ನಿ ಕಸ್ಟ್ ಸೊಸ್ತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:17
10 ತಿಳಿವುಗಳ ಹೋಲಿಕೆ  

ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.


ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.


ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.


ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.


ನೀವು ಒಳ್ಳೆಯದನ್ನು ಮಾಡುವಾಗ ನಿಮ್ಮನ್ನು ಕುರಿತು ಕೆಟ್ಟಮಾತುಗಳನ್ನು ಆಡಲು ಮೂಢರಿಗೆ ಸಾಧ್ಯವಾಗುವುದಿಲ್ಲ. ದೇವರ ಅಪೇಕ್ಷೆಯೂ ಇದೇ ಆಗಿದೆ.


ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.


ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು