Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:18 - ಪರಿಶುದ್ದ ಬೈಬಲ್‌

18 ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತ್ ಪಾಪಾಂಚ್ಯಾ ಸಾಟ್ನಿ ಅನಿ ಸಗ್ಳ್ಯಾಂಚ್ಯಾ ಸಾಟ್ನಿ ಮರ್ಲೊ, ತುಮ್ಕಾ ದೆವಾಕ್ಡೆ ಘೆವ್ನ್ ಜಾವ್ಕ್ ಸಾಟ್ನಿ ವಿಶ್ವಾಸ್ ನತ್ತ್ಯಾ ಲೊಕಾಚ್ಯಾ ಜಾಗ್ಯಾರ್ ಎಕ್ ಬರೊ ಮಾನುಸ್ ಮರ್‍ಲೊ ತೆಕಾ ಅಂಗಾಚ್ಯಾ ಮಾಸಾಚ್ಯಾ ರುಪಾರ್ ಜಿವಾನಿ ಮಾರುನ್ ಹೊಲ್ಲೆ, ಖರೆ ಆತ್ಮಿಕ್ ರಿತಿನ್ ಝಿತ್ತೊ ಕರುನ್ ಉಟ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:18
34 ತಿಳಿವುಗಳ ಹೋಲಿಕೆ  

ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ.


ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.


ಬಳಿಕ ಆತನು ಆತ್ಮರೂಪದಲ್ಲಿ ಹೋಗಿ ಸೆರೆಮನೆಯಲ್ಲಿದ್ದ ಆತ್ಮಗಳಿಗೆ ಸುವಾರ್ತೆ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು