1 ಪೇತ್ರನು 3:3 - ಪರಿಶುದ್ದ ಬೈಬಲ್3 ತಲೆಕೂದಲನ್ನು ಸುಂದರವಾಗಿ ಬಾಚಿಕೊಳ್ಳುವುದಾಗಲಿ ಬಂಗಾರದ ಒಡವೆಗಳಾಗಲಿ ಒಳ್ಳೆಯ ಬಟ್ಟೆಗಳಾಗಲಿ ನಿಮ್ಮ ಸೌಂದರ್ಯದ ಸಾಧನಗಳಾಗದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಟಕ್ಲ್ಯಾಚಿ ಕೆಸಾ ಬರೆ ಕರುನ್ ಉಕ್ಲುನ್ ಘೆತಲೆ ಹೊಂವ್ದಿತ್, ಸೊನ್ಯಾಚಿ ವಸ್ತಾ ನೆಸ್ತಲೆ ಬರೆ ಕಪ್ಡೆ ನೆಸ್ತಲೆ ಹೊಂವ್ದಿ ಹೆ ಸಗ್ಳೆ ಖಾಲಿ ದಾಕ್ವುಕ್ ಸಾಟ್ನಿ ಕರುಚೆ ನ್ಹಯ್, ಶಿಂಗಾರ್ ಹೊಯ್ ನಸ್ತಾನಾ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.
“ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.