1 ಪೇತ್ರನು 3:4 - ಪರಿಶುದ್ದ ಬೈಬಲ್4 ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹೆಚ್ಯಾ ಬದ್ಲಾಕ್ ಭುತ್ತುರ್ಲೊ ಮನ್ ಎಕ್ ಬೊಳ್ಯಾ ಪಾನಾನ್ ಅನಿ ಶಾಂತ್ಪಾನಾಚ್ಯಾ ಆತ್ಮ್ಯಾನ್ ಭರುನ್ ನಾಸ್ ಹೊಯ್ ನಸಲ್ಲ್ಯಾ ಶಿಂಗಾರ್ ಭರಲ್ಲೆ ರ್‍ಹಾಂವ್ದಿ, ತೆ ದೆವಾಚ್ಯಾ ನದ್ರೆಕ್ ಲೈ ಕಿಮ್ತಿಚೆ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.