1 ಪೇತ್ರನು 3:7 - ಪರಿಶುದ್ದ ಬೈಬಲ್7 ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ. ಅಧ್ಯಾಯವನ್ನು ನೋಡಿ |
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.