1 ಪೇತ್ರನು 3:8 - ಪರಿಶುದ್ದ ಬೈಬಲ್8 ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಆಕ್ರಿಕ್ ಮಿಯಾ ತುಮ್ಕಾ ಸಾಂಗ್ತಾ ತುಮಿ ಸಗ್ಳೆ ಜನಾ ಎಕ್ ಮಾನಾಚೆ ಅನಿ ದಯಾಳ್ ಹೊವ್ಚೆ, ಎಕಾಮೆಕಾಕ್ ಪ್ರೆಮಾನ್ ರ್‍ಹಾವ್ಚೆ, ಅನಿ ಕರಾನ್ ದಾಕ್ವುತಲೆ ಅನಿ ಎಕಾಮೆಕಾಕ್ ಖಾಯ್ಲ್ ಹೊವ್ನ್ ಚಲ್ತಲೆ ಹೊವ್ನ್ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.