Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:11 - ಪರಿಶುದ್ದ ಬೈಬಲ್‌

11 ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಶಿಕಾಪಾ ಕರ್ತಲೊ ದೆವಾಚಿ ಗೊಸ್ಟಿಯಾಚ್ ಶಿಕ್ವುಂದಿತ್, ಸೆವಾ ಕರ್ತಲೊ ಮಾನುಸ್ ದೆವಾನ್ ದಯಾ ಕರುನ್ ದಿಲ್ಲ್ಯಾ ಬಳಾವೈನಾ ಸೆವಾ ಕರುಂದಿತ್, ತುಮಿ ಅಸೆ ಕರ್ಲ್ಯಾರ್ ತುಮ್ಚ್ಯಾ ಹರ್ ಎಕ್ ಕಾಮಾತ್ನಿ ಬಿ ಜೆಜುಕ್ರಿಸ್ತಾ ವೈನಾ ದೆವಾಕ್ ಹೊಗ್ಳಾಪ್ ಹೊತಾ, ಅಧಿಕಾರ್ ಅನಿ ಮಹಿಮಾ ಸದಾ ಸರ್ವತಾಕ್ ತೆಜೆಚ್ ಹೊಂವ್ದಿ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:11
47 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.


ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.


ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.


ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ.


ಸರ್ವಾಧಿಪತ್ಯವು ಎಂದೆಂದಿಗೂ ಆತನದೇ. ಆಮೆನ್.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.


ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ಒಬ್ಬನೇ ಜ್ಞಾನಿಯಾದ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.


ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.


ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆಂದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿಂದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.


ಸತ್ಯಬೋಧನೆಯನ್ನು ಅನುಸರಿಸಲು ಜನರು ಮಾಡಬೇಕಾದ ಕಾರ್ಯಗಳನ್ನು ಅವರಿಗೆ ನೀನು ತಿಳಿಸು.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು