1 ಪೇತ್ರನು 4:12 - ಪರಿಶುದ್ದ ಬೈಬಲ್12 ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಅತ್ತಾ ಸೊಸುಲಾಗಲ್ಯಾ ತರಾಸಾಚ್ಯಾ ವಿಶಯಾತ್ ಅಜಾಪ್ ಹೊವ್ ನಕಾಸಿ, ತೆ ತುಮ್ಚೊ ವಿಶ್ವಾಸ್ ಪರಿಕ್ಷಾ ಕರ್ತಾ ಸೊಸುಕ್ ಹೊಯ್ನಸಲೊ ತರಾಸ್ ತುಮ್ಕಾ ಹೊವ್ಲಾ ಮನುನ್ ಚಿಂತುನಕಾಸಿ. ಅಧ್ಯಾಯವನ್ನು ನೋಡಿ |