1 ಪೇತ್ರನು 4:15 - ಪರಿಶುದ್ದ ಬೈಬಲ್15 ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತುಮ್ಚ್ಯಾತ್ಲೊ ಕೊನ್ ಬಿ ಖುನಿಗಾರ್, ಚೊರ್, ಅಪರಾದಿ, ನಾಹೊಲ್ಯಾರ್ ದುಸ್ರ್ಯಾ ಲೊಕಾಂಚ್ಯಾ ಕಾಮಾಕ್ನಿ ಮದ್ದಿ ಪಡ್ತಲ್ಯಾಂಚ್ಯಾ ತರಾಸ್ ಸೊಸ್ತಲೆ ನಕ್ಕೊ. ಅಧ್ಯಾಯವನ್ನು ನೋಡಿ |
ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.