Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:17 - ಪರಿಶುದ್ದ ಬೈಬಲ್‌

17 ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ಝಡ್ತಿಚೊ ಯೆಳ್ ಶುರು ಹೊಲಾ ದೆವಾಚ್ಯಾ ಗುಡಿತ್ ಲೊಕಾಕ್ನಿ ಅದ್ದಿ ಝಡ್ತಿ ಕರುನ್ ಹೊತಾ, ಅಮ್ಚ್ಯಾಕ್ನಾ ತೆ ಶುರು ಹೊಲ್ಯಾರ್ ದೆವಾಚಿ ಬರಿ ಖಬರ್ ಮಾನಿನಸಲ್ಲ್ಯಾ ಲೊಕಾಕ್ನಿ ಕಾಯ್ ಹೊತಾ ಆಸಿಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:17
26 ತಿಳಿವುಗಳ ಹೋಲಿಕೆ  

ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.


ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ದೇವರು ತನ್ನ ದೂತರ ಮೂಲಕ ಕೊಟ್ಟ ವಾಕ್ಯವು ನಿಜವಾದದ್ದೆಂದು ತೋರಿಸಲ್ಪಟ್ಟಿದೆ. ಯೆಹೂದ್ಯರು ಈ ವಾಕ್ಯಕ್ಕೆ ವಿರುದ್ಧವಾಗಿ ತಪ್ಪು ಮಾಡಿದಾಗಲೆಲ್ಲಾ ಮತ್ತು ಅವಿಧೇಯರಾದಾಗಲೆಲ್ಲಾ ತಕ್ಕ ದಂಡನೆ ಹೊಂದುತ್ತಿದ್ದರು.


ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.


ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು