1 ಪೇತ್ರನು 4:3 - ಪರಿಶುದ್ದ ಬೈಬಲ್3 ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚಿ ಲೈಂಗಿಕ್ ಪಾನಾಚಿ ಪಾಪ್ ಕರುಕ್ ಪೊಜ್ಡೆಪಾನ್, ಫಿದೊಡೆಪಾನ್, ಗಮ್ಮತ್ ಕರ್ತಲೆ, ಅನಿ ಮುರ್ತಿ ಪುಜ್ಯಾಚ್ಯಾ ಬುರ್ಶ್ಯಾ ಚಾಲಿಕ್ ಪಡಲೆ ಹೊಲ್ಯಾಸಿ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.