Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:1 - ಪರಿಶುದ್ದ ಬೈಬಲ್‌

1 ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅತ್ತಾ ಮಿಯಾ ಎಕ್ ಜಾನ್ತೊ ಹೊವ್ನ್ ಅನಿ ಕ್ರಿಸ್ತಾಚ್ಯಾ ಕಸ್ಟಾಚೊ ಎಕ್ ಸಾಕ್ಷಿ ಹೊವ್ನ್, ಅನಿ ತಸೆಚ್ ಫಿಡೆ ದಿಸುನ್ ಯೆತಲ್ಲ್ಯಾ ಮಹಿಮೆತ್ ವಾಟೊ ಘೆತಲೊ ಎಕ್ ಮಾನುಸ್ ಹೊವ್ನ್ ತುಮ್ಚ್ಯಾ ಮದ್ದಿ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಜಾನ್ತ್ಯಾನಿಕ್ಡೆ ವಿನಂತಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:1
38 ತಿಳಿವುಗಳ ಹೋಲಿಕೆ  

ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.


ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ


ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು.


ಬಳಿಕ, ಅಪೊಸ್ತಲರು ಮತ್ತು ಹಿರಿಯರು ಈ ಸಮಸ್ಯೆಯನ್ನು ಪರಿಶೀಲಿಸಲು ಸೇರಿಬಂದರು.


ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ಸಭಾಹಿರಿಯನು, ತಾನು ಸತ್ಯವಾಗಿಯೂ ಪ್ರೀತಿಸುವ, ತನ್ನ ಪ್ರಿಯ ಸ್ನೇಹಿತನಾದ ಗಾಯನಿಗೆ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು